70,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ

0

ವದೆಹಲಿ: ರೋಜಗಾರ್ ಮೇಳದ  ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ  70,000 ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ರೈಲ್ವೆ, ಅಂಚೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭರ್ತಿಯಾದ ನೌಕರರಿಗೆ ನೇಮಕಾತಿ ಪತ್ರ ನೀಡಿದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಅಜಾದಿ ಕಾ ಅಮೃತ್ ಕಾಲ ಪ್ರಾರಂಭವಾಗಿರುವ ಹಿನ್ನಲೆ,

ಈ ಅವಧಿಯಲ್ಲಿ ಸರ್ಕಾರಿ ಸೇವೆಗಳಿಗೆ ಸೇರ್ಪಡೆಯಾಗುವವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿ ಹೊಂದಿರುತ್ತಾರೆ. ರೋಜಗಾರ್ ಮೇಳ ಎನ್‌ಡಿಎ – ಬಿಜೆಪಿ ಸರ್ಕಾರದ ಹೊಸ ಗುರುತು ಎಂದರು. ಈ ವೇಳೆ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜಕೀಯ ಭ್ರಷ್ಟಾಚಾರ, ಯೋಜನೆಗಳಲ್ಲಿನ ಅವ್ಯವಹಾರಗಳು,

ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ಅವರ ಗುರುತು ಎಂದು ವಾಗ್ದಾಳಿ ನಡೆಸಿದರು. ಹಿಂದೆ ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರವನ್ನು ರಾಜವಂಶದ ಪಕ್ಷ ಉತ್ತೇಜಿಸಿತ್ತು. ಕೆಲವು ಪಕ್ಷಗಳು ವಿವಿಧ ಹುದ್ದೆಗಳಿಗೆ ತಮ್ಮದೇ ಆದ ದರ ಕಾರ್ಡ್ ನಿಗದಿಪಡಿಸಿತ್ತು. ಈ ಮೂಲಕ ಯುವಕರನ್ನು ಲೂಟಿ ಮಾಡಲಾಗುತ್ತಿತ್ತು. ಯುವಕರ ಉಜ್ವಲ ಭವಿಷ್ಯವನ್ನು ಕಾಪಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು.

About Author

Leave a Reply

Your email address will not be published. Required fields are marked *

You may have missed