ದೋಣಿ ದುರಂತದಲ್ಲಿ 300 ಪಾಕ್ ಪ್ರಜೆಗಳ ದುರಂತ ಸಾವು

0

ಸ್ಲಾಮಾಬಾದ್‌: ಜೂನ್‌ 14ರಂದು ಗ್ರೀಸ್‌ನ ಕರಾವಳಿ ಪ್ರದೇಶದಲ್ಲಿ ನಡೆದ ದೋಣಿ ದುರಂತದಲ್ಲಿ 300 ಮಂದಿ ಪಾಕಿಸ್ತಾನದ ನಾಗರೀಕರು ಸಾವನ್ನಪ್ಪಿದ್ದು, ಕೇವಲ 12 ಮಂದಿ ಮಾತ್ರವೇ ಘಟನೆಯಲ್ಲಿ ಬದುಕುಳಿದಿದ್ದಾರೆ ಎಂದು ಪಾಕಿಸ್ತಾನ ಸಚಿವಾಲಯ ತಿಳಿಸಿದೆ.

ಪ್ರತಿ ವರ್ಷ ಪಾಕಿಸ್ತಾನದ ಸಾವಿರಾರು ಸಂಖ್ಯೆಯ ಯುವ ಸಮೂಹ ಉತ್ತಮ ಜೀವನ ಕಂಡುಕೊಳ್ಳುವ ಕಾರಣದಿಂದಾಗಿ ಯೂರೋಪ್‌ಗೆ ವಲಸೆ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೆಯೇ ಕಳೆದ ವಾರ ವಲಸೆ ಹೋಗುತ್ತಿದ್ದ ವೇಳೆ ಗ್ರೀಸ್‌ ನ ಕರಾವಳಿ ಪ್ರದೇಶದಲ್ಲಿ ನೂರಾರು ಜನರಿದ್ದ ಬೋಟ್‌ ಮುಳುಗಿ 300 ಮಂದಿ ಪಾಕ್‌ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 12 ಮಂದಿ ಪಾಕ್‌ ಪ್ರಜೆಗಳು ಮಾತ್ರ ಬದುಕುಳಿದಿದ್ದಾರೆ ಎಂದು ಪಾಕ್‌ ಸಚಿವಾಲಯ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ 10 ಮಂದಿಯನ್ನ ಬಂಧಿಸಲಾಗಿದ್ದು, ಪಾಕ್‌ ಆಡಳಿತ ಕಾಶ್ಮೀರದ 9 ಜನರನ್ನು ಬಂಧಿಸಲಾಗಿದೆ. ಅಲ್ಲದೆ ಮತ್ತೋರ್ವನನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ.
ಬೋಟ್‌ ದುರಂತದಲ್ಲಿ ಮೃತಪಟ್ಟವರ ಸ್ಮರಣಾರ್ಥವಾಗಿ ಪಾಕ್ ನಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ ಆಚರಿಸಲಾಯಿತು. ಇದೇ ವೇಳೆ ಪ್ರಧಾನಿ ಶೆಹಬಾಜ್ ಷರೀಫ್ ಅವರು ಕಳ್ಳಸಾಗಣೆಯಲ್ಲಿ ತೊಡಗಿರುವ ಏಜೆಂಟ್‌ಗಳ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.

About Author

Leave a Reply

Your email address will not be published. Required fields are marked *

You may have missed