ಇಂದು ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಚಾಲನೆ

0

ಬೆಂಗಳೂರು : ಇಂದು ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ.

ಸೇವಾ ಸಿಂಧು ಪೋರ್ಟಲ್​ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್​ಪೋರ್ಟಲ್​ ಸಿಎಂರಿಂದ ಲಾಂಚ್ ಮಾಡಲಿದ್ದಾರೆ.

ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. (https://sevasindhugs.karnataka.gov.in/gruhalakshmi) ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.

ಗೃಹಲಕ್ಷ್ಮಿ, ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು DBT ಮೂಲಕ ನೀಡುವ ಯೋಜನೆಯಾಗಿರುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ, ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ. ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ.

About Author

Leave a Reply

Your email address will not be published. Required fields are marked *

You may have missed