11,307 ಮಂದಿ ಪೌರ ಕಾರ್ಮಿಕರ ಖಾಯಂಗೆ ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: 11,307 ಮಂದಿ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಖಾಯಂಗೊಳಿಸಲು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ದಿನಗೂಲಿ ಆಧಾರದಲ್ಲಿ ನಿರಂತರವಾಗಿ ಕೆಲಸ ನಿರ್ವಹಿಸಿರುವ ಪೌರ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ 2 ವರ್ಷಗಳ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆದು ದಾಖಲಾತಿಗಳನ್ನು ನೇಮಕಾತಿಯಲ್ಲಿ ಆದ್ಯತೆ ಮೇರೆಗೆ ಪರಿಗಣಿಸಬೇಕು ಎಂದು ಸೂಚಿಸಿದ್ದಾರೆ.