ಪಾಕಿಸ್ತಾನದಲ್ಲಿ ಬಸ್ ಪಲ್ಟಿಯಾಗಿ 15 ಮಂದಿ ಸಾವು, 60ಕ್ಕೂ ಅಧಿಕ ಮಂದಿಗೆ ಗಾಯ

0

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮದುವೆಯ ದಿಬ್ಬಣ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

ಇಸ್ಲಾಮಾಬಾದ್‌ನಿಂದ ಲಾಹೋರ್‌ಗೆ ತೆರಳುತ್ತಿದ್ದ ಬಸ್, ಲಾಹೋರ್‌ನಿಂದ 240 ಕಿಮೀ ದೂರದಲ್ಲಿರುವ ಕಲ್ಲರ್ ಕಹಾರ್ ಸಾಲ್ಟ್ ರೇಂಜ್ ಪ್ರದೇಶದಲ್ಲಿ ಬಸ್‌ ನ ಬ್ರೇಕ್‌ ಫೈಲ್‌ ಆಗಿ ಅಪಘಾತಗೊಂಡಿದೆ.

ಬಸ್ ಪಲ್ಟಿಯಾಗುವ ಮುನ್ನ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು, ನಂತರ ಆಯತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಕಂದಕಕ್ಕೆ ಉರುಳಿ ಬಿದ್ದಿದೆ.

ಬಸ್‌ ನಲ್ಲಿ ಇದ್ದ ಪ್ರಯಾಣಿಕರು ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬ್ರೇಕ್ ವೈಫಲ್ಯ ಆಗಿದ್ದೇ ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಅವಳಿ ನಗರಗಳಾದ ರಾವಲ್ಪಿಂಡಿ ಮತ್ತು ಇಸ್ಲಾಮಾಬಾದ್‌ನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಅವರಲ್ಲಿ 11 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಪಘಾತದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ವಿಷಾದ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed