1,61,958 ಗ್ರಾಹಕರಿಂದ ಗೃಹಜ್ಯೋತಿ ಯೋಜನೆಗೆ ನೋಂದಣಿ

0

ಬೆಂಗಳೂರು ;– ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಭಾನುವಾರದಿಂದ ಶುರುವಾಗಿದೆ. ಅರ್ಜಿ ಸಲ್ಲಿಕೆಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಅದರಂತೆ ನೋಂದಣಿ ಪ್ರಕ್ರಿಯೆಯ 2 ನೇ ದಿನವಾದ ನಿನ್ನೆ ಒಟ್ಟು 1,61,958 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಒನ್‌, ಕರ್ನಾಟಕ ಒನ್‌ ಹಾಗು ಗ್ರಾಮ ಒನ್‌ಗಳಲ್ಲಿ ನೋಂದಣಿ ನಿರಾತಂಕವಾಗಿ ನಡೆಯಿತು.ನೋಂದಣಿ ಪ್ರಕ್ರಿಯೆ ಸರಳೀಕರಣವಾಗಿದ್ದು, ಗ್ರಾಹಕರು ಯಾವುದೇ ದಾಖಲೆಗಳನ್ನು ನೀಡಬೇಕಾಗಿಲ್ಲ. ವಿದ್ಯುತ್‌ ಸಂಖ್ಯೆಯಲ್ಲಿರುವ ಖಾತೆ ಸಂಖ್ಯೆ, ಗ್ರಾಹಕರ ಆಧಾರ ಸಂಖ್ಯೆ ಹಾಗೂ ಮೊಬೈಲ್‌ ಸಂಖ್ಯೆಯನ್ನಷ್ಟೇ ನಮೂದಿಸಿದರೆ ಸಾಕು. ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ನಡೆಯುತ್ತಿದೆ. ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಮಾಡಲಾಗುತ್ತಿದೆ. ನೋಂದಣಿ ಪ್ರಕ್ರಿಯೆಗೆ ಯಾವುದೇ ಗಡುವು ನಿಗದಿಪಡಿಸಲಾಗಿಲ್ಲ. ಆದ್ದರಿಂದ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed