2022-23 ನೇ ಸಾಲಿನ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

0

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಿದೆ. 2019-20 ನೇ ಸಾಲಿನ ಪುಶ್ನೆಪತ್ರಿಕೆಯ ಸ್ಮರೂಪ ಮತ್ತು ಕಠಿಣತೆಯ ಮಟ್ಟವನ್ನು ಅನುಸರಿಸಿ 2022-23 ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅದರಂತೆ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷ ಹಿಂದಿ, ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜವಿಜ್ಞಾನ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಲಿಯಲ್ಲಿ ಸಿದ್ಧಪಡಿಸಲಾಗಿದ್ದು, ಸದರಿ, ಮಾದರಿ, ಪ್ರಶ್ನೆಪತ್ರಿಕೆಗಳನ್ನು ಮಂಡಲಿಯ ಜಾಲತಾಣ kseah.karnataka.gov.in ರಲ್ಲಿ ಪ್ರಕಟಿಸಲಾಗಿದೆ.

ಮಾದರಿ ಪ್ರಶ್ನೆಪತ್ರಿಕೆಗಳು ಹೊಂದಿರುವ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಮುಂಬರುವ 2023 ರ ಮಾರ್ಚ್/ಏಪ್ರಿಲ್, ಎಸ್‌.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನಪತ್ರಿಕೆಗಳು ಒಳಗೊಂಡಿರುತ್ತವೆ. ಆದ್ಯರಿಂದ ಈ ಮಾದರಿ ಪ್ರಶ್ನೆ ಪತ್ರಿಕೆಗಳ ಉಪಯೋಗ ಪಡೆಯುವಂತೆ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರುಗಳು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲು ಈ ಮೂಲಕ ತಿಳಿಸಿದೆ. ಇನ್ನುಳಿದ ಭಾಷಾ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮುಂದಿನ ದಿನಗಳಲ್ಲಿ ಮಂಡಲಿಯ ಜಾಲತಾಣದಲ್ಲಿ ಪಕಟಿಸಲು ಕ್ರಮವಹಿಸಲಾಗುವುದು.

About Author

Leave a Reply

Your email address will not be published. Required fields are marked *

You may have missed