40% ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ: ಕಾಂಗ್ರೆಸ್

0

ಬೆಂಗಳೂರು: ಪ್ರವಾಹ ಬಂದಾಗ ಕರ್ನಾಟಕದತ್ತ ತಿರುಗಿಯೂ ನೋಡದ ಮೋದಿ ಈಗ ರಾಜ್ಯದ ಪ್ರವಾಸ ಕೈಗೊಂಡಿರುವುದಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕರ್ನಾಟಕವು ಪ್ರತಿ ವರ್ಷ ನಿರಂತರ ಪ್ರವಾಹ ಎದುರಿಸಿದಾಗ, ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ, ಕರ್ನಾಟಕಕ್ಕೆ ನಯಾಪೈಸೆ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿಯವರು ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದಾರೆ.

 

ಈ ದ್ರೋಹಕ್ಕೆ ಧನ್ಯವಾದಗಳು! ಥ್ಯಾಂಕ್ಯೂ ಮೋದಿ ಎಂಬ ಹ್ಯಾಷ್​​ಟ್ಯಾಗ್ ಅಡಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ. ಮೋದಿಯವರು ಶಿವಮೊಗ್ಗ ಹಾಗೂ ಬೆಳಗಾವಿಗೆ ಬೇಟಿ ನೀಡಿದ ಸಂದರ್ಭದಲ್ಲೇ ಅವರನ್ನು ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ. 40% ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ, ಕ್ರಮವೂ ಇಲ್ಲ. ಹಿಂದೆ ಪ್ರಧಾನಿ ಭೇಟಿಗಾಗಿ ಹಾಕಿದ್ದ ರಸ್ತೆ ಕಿತ್ತು ಬಂದಿದ್ದಕ್ಕೆ ವರದಿ ಕೇಳಿದ್ದರು, ಆ ಲೂಟಿಯ ಬಗ್ಗೆ ತನಿಖೆಯೇ ಇಲ್ಲ. ಸಂತೋಷ್ ಪಾಟೀಲ್ ಪತ್ರಕ್ಕೆ ಪ್ರಧಾನಿಯ ಉತ್ತರವಿಲ್ಲ. ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ1 ಮಾಡಿದ್ದಕ್ಕೆ ಮೋದಿ ಅವರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

About Author

Leave a Reply

Your email address will not be published. Required fields are marked *

You may have missed