ಟ್ವಿಟರ್‌ಗೆ 50 ಲಕ್ಷ ರೂ. ದಂಡ ಹಾಕಿದ ಕರ್ನಾಟಕ ಹೈಕೋರ್ಟ್‌

0

ಬೆಂಗಳೂರು : ನಗರದ ಹೈಕೋರ್ಟ್ ಪೀಠವು ಟ್ವಿಟರ್‌ಗೆ 50 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಕೇಂದ್ರ ವಿದ್ಯುನ್ಮಾನ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯು ವ್ಯಕ್ತಿಗತವಾಗಿ ಖಾತೆ ನಿಷೇಧಿಸುವಂತೆ ಸೂಚಿಸಿದ್ದ ನಿರ್ಬಂಧ ಆದೇಶವನ್ನು ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡಿದ್ದು, ಈ ಮೇಲಿನ ಆದೇಶ ನೀಡಿದೆ.

 

ಟ್ವಿಟ್ಟರ್‌ ವಿರುದ್ಧದ ಜಟಾಪಟಿಯಲ್ಲಿ ಕೇಂದ್ರ ಸರ್ಕಾರಕ್ಕೆ ಗೆಲುವು ಸಿಕ್ಕಿದೆ. ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟ್ವಿಟ್ಟರ್‌ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿ 50 ಲಕ್ಷ ರೂ. ದಂಡ ವಿಧಿಸಿದೆ.

ನ್ಯಾ| ಕೃಷ್ಣ ಎಸ್‌.ದೀಕ್ಷಿತ್‌ ನೇತೃತ್ವದ ಏಕಸದಸ್ಯ ಪೀಠವು ಎ.21ರಂದು ಕಾದಿರಿಸಿದ್ದ ಮಹತ್ವದ ಆದೇಶವನ್ನು ಪ್ರಕಟಿಸಿದ್ದಾರೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ 45 ದಿನದೊಳಗೆ ಟ್ವಿಟರ್‌ 50 ಲಕ್ಷ ರೂ. ದಂಡ ಪಾವತಿಸಬೇಕು. ಒಂದು ವೇಳೆ ನಿರ್ದಿಷ್ಟ ಸಮಯದೊಳಗೆ ದಂಡ ಪಾವತಿಸಲು ವಿಫ‌ಲವಾದರೆ ಪ್ರತಿ ದಿನ ಹೆಚ್ಚುವರಿಯಾಗಿ 5 ಸಾವಿರ ರೂ. ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯವು ಸೂಚನೆ ನೀಡಿದೆ.

ನಿಮಗೆ ನೋಟಿಸ್ ನೀಡಲಾಗಿತ್ತು. ಆದರೆ ನೀವು ಸರಿಯಾಗಿ ಪಾಲಿಸಲಿಲ್ಲ. ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೇ 7 ವರ್ಷಗಳ ಜೈಲು ಶಿಕ್ಷೆ ಮತ್ತು ಅನಿಯಮಿತ ದಂಡವನ್ನು ವಿಧಿಸಲಾಗುತ್ತದೆ. ನೀವು ನಿಯಮಾನುಸಾರಗಳನ್ನು ಪಾಲಿಸದೇ ಇರುವುದಕ್ಕೆ ಹಾಗೂ ವಿಳಂಬಗೊಳಿಸಿದ್ದಕ್ಕೆ ಯಾವುದೇ ಸ್ಪಷ್ಟ ಕಾರಣಗಳನ್ನು ತಿಳಿಸಿಲ್ಲ. ಈಗಾಗಲೇ ಒಂದು ವರ್ಷಕ್ಕಿಂತ ಹೆಚ್ಚು ವಿಳಂಬವಾಗಿದೆ. ಆದರೇ ಈಗ ಇದ್ದಕ್ಕಿದ್ದಂತೆ ಪಾಲಿಸುತ್ತೇವೆ ಎಂದು ನ್ಯಾಯಾಲಯಕ್ಕೆ ಬಂದಿದ್ದೀರಿ. ನೀವು ರೈತರಲ್ಲ ನೀವು ಮಿಲಿಯನ್ ಡಾಲರ್ ಕಂಪನಿಯ ಮಾಲೀಕರು ಎಂದು ಕೋರ್ಟ್‌ ತನ್ನ ಆದೇಶದಲ್ಲಿ ಹೇಳಿದೆ.

ಏನಿದುಪ್ರಕರಣ?
ಸ್ವತಂತ್ರ ಸಿಖ್ ದೇಶವನ್ನು ಬೆಂಬಲಿಸುವ ಖಾತೆಗಳು, ರೈತರ ಪ್ರತಿಭಟನೆ ಕುರಿತಾಗಿ ಸುಳ್ಳು ಮಾಹಿತಿ ಹರಡುವ ಪೋಸ್ಟ್‌ಗಳು ಹಾಗೂ ಕೋವಿಡ್ 19 ಸಾಂಕ್ರಾಮಿಕವನ್ನು ಸರ್ಕಾರ ನಿರ್ವಹಣೆ ಮಾಡಿರುವ ರೀತಿಯನ್ನು ಟೀಕಿಸುವ ಟ್ವೀಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ 2021-22ರ ಅವಧಿಯಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಟ್ವಿಟ್ಟರ್‌ಗೆ ಆದೇಶಿಸಿತ್ತು.

ಈ ಸಂದರ್ಭದಲ್ಲಿ ಟ್ವಿಟ್ಟರ್‌ ಆಡಳಿತವನ್ನು ಜಾಕ್‌ ಡಾರ್ಸಿ ನೇತೃತ್ವದ ತಂಡ ನೋಡಿಕೊಳ್ಳುತ್ತಿತ್ತು. ಐಟಿ ಸಚಿವಾಲಯದ ಆದೇಶಕ್ಕೆ ಟ್ವಿಟ್ಟರ್‌ ಕಂಪನಿ ಸರಿಯಾಗಿ ಸ್ಪಂದನೆ ನೀಡಿರಲಿಲ್ಲ. ಈ ಕಾರಣಕ್ಕೆ ನಮ್ಮ ಆದೇಶಗಳನ್ನು ಸರಿಯಾಗಿ ಪಾಲಿಸದೆ ಇದ್ದರೆ ಕ್ರಿಮಿನಲ್ ಪ್ರಕ್ರಿಯೆ ಎದುರಿಸಬೇಕಾಗುತ್ತದೆ. ಯಾವುದೇ ಕಂಪನಿ ಭಾರತದಲ್ಲಿ ಕಾರ್ಯನಿರ್ವಹಿಸುವಾಗ ನಮ್ಮ ದೇಶದ ಕಾನೂನನ್ನು ಪಾಲಿಸಬೇಕು ಎಂದು ಎಚ್ಚರಿಕೆ ನೀಡಿತ್ತು.

About Author

Leave a Reply

Your email address will not be published. Required fields are marked *

You may have missed