ಬಿಬಿಎಂಪಿಯ 9 ಅಧಿಕಾರಿಗಳು ಅಮಾನತು

0

ಬೆಂಗಳೂರು:– ಕಳಪೆ ಕಾಮಗಾರಿ ಹಿನ್ನೆಲೆ ಬಿಬಿಎಂಪಿಯ 9 ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ವಿಧಾನಸೌಧದಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂಬುದಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಬೆನ್ನಲ್ಲೇ, ಕಳಪೆ ಕಾಮಗಾರಿಯ ಹಿನ್ನಲೆಯಲ್ಲಿ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ 9 ಇಂಜಿನಿಯರ್, ಓರ್ವ ಅಧೀಕ್ಷಕ, ಓರ್ವ ಉಪ ನಿರ್ದೇಶಕನನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಈ ಮೂಲಕ ಕಳಪೆ ಕಾಮಗಾರಿ ನಡೆಸಿದಂತ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.

About Author

Leave a Reply

Your email address will not be published. Required fields are marked *

You may have missed