ಬೆಂಗಳೂರಲ್ಲಿ ಮಸೀದಿಗೆ ಹುಸಿ ಬಾಂಬ್ ಬೆದರಿಕೆ ಕರೆ

0

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದ ಆಜಾಂ ಮಸೀದಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಸೀದಿಗೆ ಬಾಂಬ್​ ಇಟ್ಟಿದ್ದಾರೆಂದು ರಾತ್ರಿ 11ಕ್ಕೆ ಅಪರಿಚಿತನೊಬ್ಬ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ತಿಳಿಸಿದ್ದಾನೆ.

ಉಗ್ರರು ಬಾಂಬ್​ ಇಟ್ಟಿದ್ದಾರೆಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು ಮಾಹಿತಿ ತಿಳಿದು ಸ್ಥಳಕ್ಕೆ ಶಿವಾಜಿನಗರ ಪೊಲೀಸರು ದೌಡಾಯಿಸಿದ್ದಾರೆ.

ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಸೀದಿ ಪರಿಶೀಲನೆ ಬಳಿಕ ಹುಸಿ ಬಾಂಬ್​ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ.

ಕರೆ ಮಾಡಿದ ವ್ಯಕ್ತಿಗಾಗಿ ಶಿವಾಜಿನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

About Author

Leave a Reply

Your email address will not be published. Required fields are marked *

You may have missed