ಮಂಡ್ಯದ ಮಿಮ್ಸ್ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆ

0

ಮಂಡ್ಯ :- ಮಂಡ್ಯ ಮಿಮ್ಸ್ ಆಸ್ಪತ್ರೆ ಶೌಚಾಲಯದಲ್ಲಿ 10 ರಿಂದ 12 ವಾರದ ಭ್ರೂಣವೊಂದು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಕೈಗೊಂಡಿದ್ದಾರೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನ ಶೌಚಾಲಯದಲ್ಲಿ ಭ್ರೂಣ ಪತ್ತೆಯಾಗಿದ್ದು, ಸುಮಾರು 10 ರಿಂದ 12 ವಾರದ ಭ್ರೂಣ ಇದು ಎಂದು ಗುರುತಿಸಲಾಗಿದೆ.

ಸಿಬ್ಬಂದಿಗಳು ಶೌಚಾಲಯವನ್ನು ಸ್ವಚ್ಚಗೊಳಿಸಲು ಹೋದ ವೇಳೆ ವಿಷಯ ಬೆಳಕಿಗೆ ಬಂದಿದೆ. ಶೌಚಾಲಯದಲ್ಲಿ ಯಾರು ಭ್ರೂಣವನ್ನು ಬಿಟ್ಟು ಹೋಗಿದ್ದಾರೆ. ಯಾಕಾಗಿ ಹೀಗೆ ಮಾಡಲಾಗಿದೆ ಎಂಬ ಬಗ್ಗೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಿಮ್ಸ್‌ ಸ್ಥಾನಿಕ ವೈದ್ಯಾಧಿಕಾರಿ ಡಾ. ವೆಂಕಟೇಶ್‌, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಅವರು ಈಗಾಗಲೇ ತನಿಖೆಯನ್ನು ಕೈಗೊಂಡಿದ್ದಾರೆ. ಭ್ರೂಣವನ್ನು ಬಿಟ್ಟು ಹೋದವರು ಯಾರು ಆಸ್ಪತ್ರೆಗೆ ದಾಖಲಾಗಿದ್ದವರು ಹೀಗೆ ಮಾಡಿದ್ದಾರೆಯೇ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಫಾರೆನ್ಸಿಕ್‌ ತಜ್ಞರನ್ನೂ ಕರೆಸಿದ್ದೇವೆ ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed