ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾನ್ಸ್ ಫಾರ್ಮರ್ ತುಂಬಿದ ಲಾರಿ ಪಲ್ಟಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾನ್ಸ್ ಫಾರ್ಮರ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಕೆಲಕಾಲ ಕಿಲೋಮೀಟರ್ ದೂರ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಪರದಾಡಿದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬಿಲ್ಲಿನ ಕೋಟೆ ಬಳಿ ಸಂಭವಿದ್ದು,
ತುಮಕೂರಿನಿಂದ ಬೆಂಗಳೂರಿಗೆ ಟ್ರಾನ್ಸ್ ಫಾರ್ಮರ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅವಘಡದಿಂದ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು ನೆಲಮಂಗಲ ಸಂಚಾರಿ ಪೊಲೀಸರು ಲಾರಿಯನ್ನ ತೆರವು ಮಾಡಿ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. ಇನ್ನೂ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.