ನೇಪಾಳದಲ್ಲಿ 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ

0

ಠ್ಮಂಡು: ನಾಲ್ವರು ಸಿಬ್ಬಂದಿ ಸೇರಿ 72 ಜನರಿದ್ದ ವಿಮಾನವು ನೇಪಾಳದ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇನಲ್ಲೇ ಪತನಗೊಂಡಿದೆ. 72 ಆಸನಗಳ ಸಾಮರ್ಥ್ಯ ಹೊಂದಿದ್ದ ಯೇತಿ ಏರ್‌ಲೈನ್ಸ್ ವಿಮಾನವು ಇಲ್ಲಿನ ಹಳೆಯ ವಿಮಾನ ನಿಲ್ದಾಣ ಹಾಗೂ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ.

ಸುಮಾರು 68 ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಕುರಿತು ಮಾತನಾಡಿರುವ ಯೇತಿ ಏರ್‌ಲೈನ್ಸ್ ವಕ್ತಾರ ಸುದರ್ಶನ್ ಬರ್ತೌಲಾ, ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed