ಫಿಲಿಪೈನ್ಸ್‌ನಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ದಾಖಲು

0

ನಿಲಾ (ಫಿಲಿಪ್ಪೀನ್ಸ್): ಮನಿಲಾ ರಾಜಧಾನಿಯ ನೈಋತ್ಯ ಭಾಗದಲ್ಲಿರುವ ಫಿಲಿಪ್ಪೀನ್ಸ್‌ನ ಭಾಗದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಮನಿಲಾ ರಾಜಧಾನಿಯ ನೈಋತ್ಯ ಭಾಗದಲ್ಲಿರುವ ಫಿಲಿಪ್ಪೀನ್ಸ್‌ನಲ್ಲಿ ಇಂದು ಬೆಳಿಗ್ಗೆ ಭೂಮಿಯಿಂದ 120 ಕಿಲೋಮೀಟರ್ ಆಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಮಿಯ ಆಳದಲ್ಲಿ ಸಂಭವಿಸುವ ಭೂಕಂಪಗಳು ಸಾಮಾನ್ಯವಾಗಿ ದೊಡ್ಡ ಹಾನಿಯನ್ನು ಉಂಟುಮಾಡುವ ಸಾಮರ್ಥ್ಯ ಕಡಿಮೆ ಇರುತ್ತದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದಿದ್ದಾರೆ.

About Author

Leave a Reply

Your email address will not be published. Required fields are marked *

You may have missed