ತಾಯಿ ಪಕ್ಕ ಮಲಗಿದ್ದ ತಿಂಗಳ ಮಗುವನ್ನು ಎಳೆದೊಯ್ದ ಬೀದಿನಾಯಿ: ಘನಗೋರ ಕೃತ್ಯ

0

ಜೈಪುರ: ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿ ನಾಯಿಯೊಂದು (Stray Dog Attack) ಎಳೆದುಕೊಂಡು ಹೋಗಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ(Rajasthan) ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಆಸ್ಪತ್ರೆಯ ವಾರ್ಡ್‌ನ ಹೊರಗೆ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಎರಡು ನಾಯಿಗಳು ಆಸ್ಪತ್ರೆಯ ಟಿಬಿ ವಾರ್ಡ್‌ನೊಳಗೆ ಹೋಗಿದ್ದು ಅವುಗಳಲ್ಲಿ ಒಂದು ಪುಟ್ಟ ಪಾಪುವನ್ನು ಕಚ್ಚಿಕೊಂಡು ಬರುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿಲಿಕೋಸಿಸ್ ಚಿಕಿತ್ಸೆಗಾಗಿ ಮಗುವಿನ ತಂದೆ ಮಹೇಂದ್ರ ಮೀನಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ ಸೀತಾರಾಮ್ ಹೇಳಿದ್ದಾರೆ. ತನ್ನ ಮೂವರು ಮಕ್ಕಳೊಂದಿಗೆ ರೋಗಿಯನ್ನು ಉಪಚರಿಸುತ್ತಿದ್ದ ಮಗುವಿನ ತಾಯಿ ರೇಖಾ ನಿದ್ರೆ ಮಾಡಿದ್ದಾಗ ಆಕೆಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ನಾಯಿ ಎತ್ತಿಕೊಂಡು ಹೋಗಿದೆ.

ಘಟನೆಯ ಸಮಯದಲ್ಲಿ ಆಸ್ಪತ್ರೆಯ ಸಿಬ್ಬಂದಿ ಕೂಡ ವಾರ್ಡ್‌ನಲ್ಲಿ ಇರಲಿಲ್ಲ ಎಂದು ಅಧಿಕಾರಿ ಹೇಳಿದರು. ವೈದ್ಯಕೀಯ ಮಂಡಳಿಯಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ತನಿಖೆಯ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ. ಏತನ್ಮಧ್ಯೆ, ಮಗುವಿನ ತಂದೆ ಆಸ್ಪತ್ರೆ ಅಧಿಕಾರಿಗಳು ಮತ್ತು ಪೊಲೀಸರಿಗೆ ತನಗೆ ತಿಳಿಸದೆ ತನ್ನ ಹೆಂಡತಿ ಖಾಲಿ ಪೇಪರ್‌ಗಳಿಗೆ ಸಹಿ ಹಾಕಿ ತನ್ನ ಮಗುವಿನ ಅಂತಿಮ ಸಂಸ್ಕಾರವನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed