ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ 8 ಮಂದಿ ದುರ್ಮರಣ

0

ಮೈಸೂರು: ಖಾಸಗಿ ಬಸ್ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ 8 ಮಂದಿ ದುರ್ಮರಣಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಗುರುತಿ ಸಿಗದಂತೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಿಸುವ ಕಾರ್ಯ ಮಾಡಿದ್ದಾರೆ. ಮಗು ಸೇರಿ ಹಲವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಕಾರ್ ನಲ್ಲಿದ್ದವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ನರಸೀಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ..

About Author

Leave a Reply

Your email address will not be published. Required fields are marked *

You may have missed