ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ – 11 ಜನ ಸ್ಥಳದಲ್ಲೇ ಸಾವು

0

ರಾಯ್ಪುರ: ಪಿಕಪ್ ವಾಹನಕ್ಕೆ (Pickup Vehicle) ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಛತ್ತೀಸ್‌ಗಢದ (Chhattisgarh) ಬುಲೋದಬಜಾರ್-ಭಟಪರಾ ರಸ್ತೆಯಲ್ಲಿ ನಡೆದಿದೆ.

 

ರಾಜಧಾನಿ ರಾಯ್ಪುರದಿಂದ ಸುಮಾರು 70 ಕಿ.ಮೀ ದೂರಲ್ಲಿರುವ ಬಲೋದಬಜಾರ್-ಭಟಪರಾ ರಸ್ತೆಯಲ್ಲಿ ಗುರುವಾರ ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದೆ. ಘಟನೆಯಲ್ಲಿ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, 12 ಜನರು ಗಾಯಗೊಂಡಿದ್ದಾರೆ.

ಸಂತ್ರಸ್ತರು ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದವರಾಗಿದ್ದು, ಅರ್ಜುನಿ ಪ್ರದೇಶದಲ್ಲಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ವೇಳೆ ಪಿಕಪ್ ವಾಹನ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವನ್ನಪ್ಪಿದವರ ಪೈಕಿ ನಾಲ್ವರು ಮಕ್ಕಳು ಸೇರಿದ್ದಾರೆ. 12 ಮಂದಿ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರಿಬ್ಬರನ್ನು ರಾಯ್ಪುರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇತರ 10 ಗಾಯಾಳುಗಳನ್ನು ಬುಲೋದಬಜಾರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಭೀಕರ ಅಪಘಾತದ ಬಗ್ಗೆ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಎಲ್ಲಾ ನೆರವು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed