ನೇಣು ಬಿಗಿದ ಸ್ಥಿತಿಯಲ್ಲಿ ಯುವ ದೇಹದಾರ್ಢ್ಯ ಪಟು ಶವ ಪತ್ತೆ
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಯುವ ದೇಹದಾರ್ಢ್ಯ ಪಟುವೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ. ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದೇಹದಾರ್ಢ್ಯ ಪಟು. ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದ ಶ್ರೀನಾಥ್ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದ.
ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶ್ರೀನಾಥ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.