ದಟ್ಟ ಮಂಜಿನಿಂದಾಗಿ ಅಪಘಾತ: ಚೀನಾದಲ್ಲಿ 17 ಮಂದಿ ಸಾವು

0

ಪೂರ್ವ ಚೀನಾದ ಜಿಯಾಂಗ್ಸಿ ಪ್ರಾಂತ್ಯದಲ್ಲಿ ಭಾನುವಾರ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸಿದ. ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮಂಜಿನಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಚೀನಾದ ಅಧಿಕೃತ ಮಾಧ್ಯಮ ಸ್ಟೇಟ್ ಬ್ರಾಡ್‌ಕಾಸ್ಟರ್ ಸಿಸಿಟಿವಿಯಲ್ಲಿ ರಸ್ತೆ ಅಪಘಾತದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಾನ್ಚಾಂಗ್ ಕೌಂಟಿಯಲ್ಲಿ ತಡರಾತ್ರಿ 1:00 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ. ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದಾರೆ.

ಮಂಜು ಮುಸುಕಿದ ವಾತಾವರಣದಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ವಾಹನಗಳನ್ನು ಎಚ್ಚರಿಕೆಯಿಂದ ಓಡಿಸಲು ಸೂಚಿಸಲಾಗಿದೆ. ಮಂಜು ದೀಪಗಳನ್ನು ಆನ್ ಮಾಡಿ, ವೇಗವನ್ನು ಕಡಿಮೆ ಮಾಡಿ ಮತ್ತು ಮುಂಭಾಗದ ವಾಹನದಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗುತ್ತದೆ.

About Author

Leave a Reply

Your email address will not be published. Required fields are marked *

You may have missed