ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್..!
ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶ್ರೀನಿವಾಸ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ನಗರದ ಕೆಂಗೇರಿ ಬಳಿ ಪರಿಚಿತರಿಗೆ ಹಾಗೂ ನಗರದ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ.
ಇದರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಬಂಧಿತ ಆರೋಪಿಯಿಂದ 1ಕೆಜಿ ಗಾಂಜಾ ಹಾಗೂ ಬೈಕ್ ಸೀಜ್ ಮಾಡಲಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಪೊಲೀಸರಿಂದ ಆರೋಪಿಯ ವಿಚಾರಣೆ ಮುಂದುವರಿದಿದೆ.