ನಿಯೋಜಿತ CM, DCMಗೆ ಅಭಿನಂದನೆ ಸಲ್ಲಿಸಿದ ಹಂಗಾಮಿ ಸಿಎಂ ಬೊಮ್ಮಾಯಿ

0

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಶುಭಹಾರೈಸಿದ್ದಾರೆ.

 

 

 

ಟ್ವೀಟ್‌ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆಶಿವಕುಮಾರ್‌ರವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಆಶಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed