ಬುರ್ಕಾ ತೊಟ್ಟು ಮೆಕ್ಕಾ ಮದೀನಾಗೆ ಹೊರಟ ನಟಿ ಸಂಜನಾ ಗರ್ಲಾನಿ

0

ಸ್ಯಾಂಡಲ್ ವುಡ್ ನಟಿ ಸಂಜನಾ ಗರ್ಲಾನಿ ಮಗು ಹಾಗೂ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಸಂಜನಾ ಬುರ್ಕಾ ತೊಟ್ಟು ಮೆಕ್ಕಾ ಹಾಗೂ ಮದೀನಾಗೆ ಹೊರಟು ನಿಂತಿದ್ದಾರೆ. ಈ ವಿಷಯವನ್ನು ಸ್ವತಃ ಸಂಜನಾ ವಿಡಿಯೋ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

 

ಬುರ್ಕಾ ಧರಿಸಿಯೇ ವಿಡಿಯೋ ಮಾಡಿರುವ ಸಂಜನಾ ಇದು ನನ್ನ ಮೊದಲ ಆಧ್ಯಾತ್ಮಿಕ ಜರ್ನಿ ಎಂದು ಹೇಳಿಕೊಂಡಿದ್ದು, ಮೆಕ್ಕಾ ಮದೀನಾಗೆ ಹೊರಟಿರುವ ಕಾರಣದಿಂದಾಗಿಯೇ ತಾವು ಬುರ್ಕಾ ಧರಿಸಿರುವುದಾಗಿಯೂ ತಿಳಿಸಿದ್ದಾರೆ.

ಸಾಕಷ್ಟು ಸಮಯಗಳ ವರೆಗೆ ಸಂಜನಾ ತಮ್ಮ ಮದುವೆ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದರು. ಡ್ರಗ್ಸ್ ಕೇಸ್ ಪ್ರಕರಣದಲ್ಲಿ ಬಂಧನವಾದಾಗಲೇ ಅವರು ಬೆಂಗಳೂರಿನ ವೈದ್ಯ ಡಾ.ಅಜೀಜ್ ಪಾಷಾ ಎಂಬುವವರನ್ನು ಮದುವೆಯಾಗಿರುವ ವಿಚಾರ ಬಹಿರಂಗವಾಗಿತ್ತು. ಸದ್ಯ ಸಂಜನಾ ಮತ್ತೆ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದು ಈ ಮಧ್ಯೆ ಮಗು, ಕುಟುಂಬಕ್ಕೂ ಸಮಯವನ್ನು ಮೀಸಲಿಡುತ್ತಿದ್ದಾರೆ. ಜೊತೆಗೆ ಅಭಿಮಾನಿಗಳ ಜೊತೆ ಬೆರೆಯುವುದಕ್ಕಾಗಿಯೇ ಅವರು ಯೂಟ್ಯೂಬ್ ಮೂಲಕ ಆಗಾಗ್ಗೆ ವಿಡಿಯೋಗಳನ್ನು ಹಾಕುತ್ತಾರೆ.

ಮೆಕ್ಕಾ ಮದೀನಾಗೆ ಹೋಗುತ್ತಿರುವ ಕುರಿತು ವಿಡಿಯೋ ಮಾಡಿರುವ ಸಂಜನಾ, ‘ಎಲ್ಲರಿಗೂ ನಮಸ್ಕಾರ. ನನ್ನ ಪ್ರೀತಿಯ ವಂದನೆಗಳು. ಇವತ್ತು ಸಂಜನಾ ಅವರು ಬುರ್ಕಾ ಹಾಕ್ಕೊಂಡು ಏನು ಮಾಡುತ್ತಿದ್ದಾರೆ ಅಂತ ಅಂದ್ಕೊಂಡಿದ್ದೀರಾ? ನಾನು ನನ್ನ ಆಧ್ಯಾತ್ಮಿಕ ಪಯಣಕ್ಕೋಸ್ಕರ ಹಾಗೂ ಮದೀನಾಗೆ ನನ್ನ ಪರಿವಾರದ ಜೊತೆ ಹೋಗುತ್ತಿದ್ದೇನೆ. ನನ್ನ ಪಯಣದಲ್ಲಿ ನೀವು ಹಾಗೂ ನಿಮ್ಮ ಆಶೀರ್ವಾದವಿರಲಿ’ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed