ತೆಲುಗು ಸ್ಟಾರ್ ನಟನಿಗೆ ನಾಯಕಿಯಾದ ನಟಿ ಶ್ರದ್ದಾ ಶ್ರೀನಾಥ್

0

ಸ್ಯಾಂಡಲ್ ವುಡ್ ನಟ, ನಟಿಯರು ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದ್ದು ಮಾಡ್ತಿದ್ದಾರೆ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಇದೀಗ ಕನ್ನಡದ ಮತ್ತೋರ್ವ ನಟಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಕನ್ನಡದ ನಟಿಯರಾದ ಶ್ರೀಲೀಲಾ, ರಶ್ಮಿಕಾ ಮಂದಣ್ಣ ಇನ್ನಿತರೆ ನಟಿಯರು ವಿವಿಧ ಭಾಷೆಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಪ್ಯಾನ್ ಇಂಡಿಯಾ ಸಿನಿಮಾ ಒಂದರಲ್ಲಿ ನಾಯಕಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ನಟಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ಧಾಗೆ ಹಲವು ಅವಕಾಶಗಳಿವೆ. ಈ ಮಧ್ಯೆ ಶ್ರದ್ಧಾ ಶ್ರೀನಾಥ್ ಪ್ಯಾನ್ ಇಂಡಿಯಾ ಸಿನಿಮಾ ಒಂದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ತೆಲುಗು ನಟ ವಿಕ್ಟರಿ ವೆಂಕಟೇಶ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.

ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಸಿನಿಮಾ ‘ಸೈಂಧವ್’ ನಲ್ಲಿ ಶ್ರದ್ಧಾ ಶ್ರೀನಾಥ್ ನಾಯಕಿ ಮಿಂಚುತ್ತಿದ್ದಾರೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾವನ್ನು ಶೈಲೇಶ್ ಕೋಲನು ನಿರ್ದೇಶಿಸುತ್ತಿದ್ದು, ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ಅಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ದಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ಸದ್ಯ ಸೈಂಧವ್ ಸಿನಿಮಾದಲ್ಲಿ ಶ್ರದ್ಧಾ ಶ್ರೀನಾಥ್ ಅವರ ಫಸ್ಟ್ ಲುಕ್ ರಿಲೀಸ್ ಆಗಿದೆ.

ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ತೆಲುಗಿನ ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನದ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಟಾಲಿವುಡ್ ಮಂದಿಯ ಗಮನ ಸೆಳೆಯಲು ರೆಡಿಯಾಗಿದ್ದಾರೆ.

About Author

Leave a Reply

Your email address will not be published. Required fields are marked *

You may have missed