ಆದಿಪುರುಷ್ ಸಿನಿಮಾ: ಕಠ್ಮಂಡುನಲ್ಲಿ ಭಾರತೀಯ ಸಿನಿಮಾಗಳು ಬ್ಯಾನ್

0

ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾದ ಡೈಲಾಗ್ ಗಳು ವಿವಾದಕ್ಕೆ ಕಾರಣವಾಗಿದೆ. ಈಗಾಗ್ಲೆ ಚಿತ್ರವನ್ನು ಬ್ಯಾನ್ ಮಾಡುವಂತೆ ಹಲವು ಸಂಘಟನೆಗಳು ಮನವಿ ಮಾಡಿವೆ. ಇದೀಗ ಚಿತ್ರದಲ್ಲಿ ಸೀತೆಯನ್ನು ಭಾರತದ ಮಗಳು ಎಂದು ಕರೆದ ಡೈಲಾಗ್ ಕುರಿತಂತೆ ಕಠ್ಮಂಡು ಮೇಯರ್ ಆಕ್ಷೇಪ ವ್ಯಕ್ತ ಪಡಿಸಿದ್ದು, ಸಿನಿಮಾದಲ್ಲಿ ಸುಳ್ಳು ಇತಿಹಾಸವನ್ನು ಹೇಳಿದ್ದಕ್ಕೆ ಚಿತ್ರವನ್ನು ಕಠ್ಮಂಡುವಿನಲ್ಲಿ ಬ್ಯಾನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದುವರೆಗೂ ಚಿತ್ರದಲ್ಲಿ ಡೈಲಾಗ್ ಬದಲಾವಣೆ ಮಾಡದ ಕಾರಣದಿಂದಾಗಿ ಕಠ್ಮಂಡು ಮೇಯರ್ ಮತ್ತೊಂದು ಸುತ್ತೋಲೆ ಹೊರಡಿಸಿದ್ದಾರೆ. ಕಠ್ಮಂಡುನಲ್ಲಿ ಒಟ್ಟು 17 ಚಿತ್ರಮಂದಿರಗಳಿದ್ದು, ಈ ಅಷ್ಟೂ ಚಿತ್ರಮಂದಿರಗಳಲ್ಲೂ ಭಾರತೀಯ ಸಿನಿಮಾಗಳನ್ನು ಪ್ರದರ್ಶನ ಮಾಡಬಾರದು ಎಂದು ಆದೇಶ ಹೊರಡಿಸಿರುವುದಾಗಿ ಮೇಯರ್ ಬಲೇನ್ ಶಾ ಟ್ವೀಟ್ ಮೂಲಕ ತಿಳಿಸಿದ್ದಾರೆ. ಆದಿಪುರುಷ ಸಿನಿಮಾ ಸೇರಿದಂತೆ ಭಾರತದ ಅಷ್ಟೂ ಸಿನಿಮಾಗಳನ್ನೂ ಬ್ಯಾನ್ ಮಾಡಿರುವುದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಿನಿಮಾದ ಡೈಲಾಗ್ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ ವರಸೆ ಬದಲಿಸಿದ್ದಾರೆ. ರಾಮಾಯಣಕ್ಕೂ ಆದಿಪುರುಷ್ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed