ಬೆಂಗಳೂರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

0

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪರಪ್ಪನ ಅಗ್ರಹಾರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಶೇಕ್ ಫಯಾಜ್ ರಾಯಸಂದ್ರ ಸಮೀಪದ ಕೆರೆಯ ಬಳಿ ಟ್ರಾವೆಲ್ ಬ್ಯಾಗ್​ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್​​ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕಿಡಿಗೇಡಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿದ್ದಾನೆ. ಪೊಲೀಸರು ಆರೋಪಿಯಿಂದ 1,80,000 ರೂ ಮೌಲ್ಯದ 6.5 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

You may have missed