ಸೊಪ್ಪು ಮಾರುವ ವೃದ್ಧೆ ಮೇಲೆ ಮಚ್ಚಿನಿಂದ ಹಲ್ಲೆ

0

ಬೆಂಗಳೂರು: ಬೀದಿ ಬದಿ ಸೊಪ್ಪು ಮಾರೋ ವೃದ್ಧೆ ಮೇಲೆ ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಕಳೆದ ಶನಿವಾರ ಜಯನಗರದ 26ನೇ ಕ್ರಾಸ್ ನಲ್ಲಿರು ಬಾಲಜಿ ಮೆಡಿಕಲ್ ಬಳಿ ಘಟನೆ ನಡೆದಿದೆ.

ವೃದ್ಧೆ ಚಂದ್ರಮ್ಮ ಬಾಲಜಿ‌ ಮೆಡಿಕಲ್ ಬಳಿ ಫುಟ್ ಬಾತ್ ನಲ್ಲಿ ಕಳೆದ ಕೆಲ ವರ್ಷಗಳಿಂದ ಸೊಪ್ಪಿನ ವ್ಯಾಪಾರಾ ಮಾಡ್ತಿದ್ರು.‌

ಶನಿವಾರ ಸಂಜೆ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚಂದ್ರಮ್ಮ ತಲೆಗೆ ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದಾರೆ. ಆದರೆ ವೃದ್ಧೆ ಚಂದ್ರಮ್ಮ ತಲೆಗೆ ತೀವ್ರ ಪೆಟ್ಟಾಗಿದೆ.‌

ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ‌.

About Author

Leave a Reply

Your email address will not be published. Required fields are marked *

You may have missed