ತೆರೆಗೆ ಬರಲಿದೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಬಯೋಪಿಕ್

0

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕುರಿತಾಗಿ ಸಿನಿಮಾವೊಂದು ತೆರೆಗೆ ಬರಲಿದೆ. ಈಗಾಗಲೇ ಚಿತ್ರಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಂಡಿದ್ದು, ಚಿತ್ರಕ್ಕೆ ‘ಯಾತ್ರಾ 2’ ಎಂದು ಹೆಸರಿಡಲಾಗಿದೆ. ತೆಲುಗು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದ್ದರೂ ಜಗನ್ ಪಾತ್ರ ಮಾಡುವುದು ತಮಿಳಿನ ಖ್ಯಾತ ನಟ ಎಂದು ಹೇಳಲಾಗುತ್ತಿದೆ.

 

ಈ ಹಿಂದೆ ಜಗನ್ ತಂದೆ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಬಯೋಪಿಕ್ ಕೂಡ ರಿಲೀಸ್ ಆಗಿತ್ತು. ಆ ಚಿತ್ರಕ್ಕೆ ‘ಯಾತ್ರಾ’ ಎಂದು ಹೆಸರಿಡಲಾಗಿತ್ತು. ಇದೀಗ ಜಗನ್ ಮೋಹನ್ ರೆಡ್ಡಿ ಸಿನಿಮಾಗೆ ‘ಯಾತ್ರಾ 2’ ಎಂದು ಹೆಸರಿಟ್ಟಿರುವುದಾಗಿ ನಿರ್ದೇಶಕ ಮಹಿ ವಿ ರಾಘವ್ ತಿಳಿಸಿದ್ದಾರೆ. ಈ ಹಿಂದೆ ಯಾತ್ರ ಸಿನಿಮಾವನ್ನು ನಿರ್ದೇಶಿಸಿದ್ದ ರಾಘವ್ ಅವರೇ ಯಾತ್ರಾ 2 ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಜಗನ್ ಮೋಈಹನ್ ಪಾತ್ರದಲ್ಲಿ ತಮಿಳು ನಟ ಜೀವ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡದೇ ಇದ್ದರೂ, ಜೀವ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಅಲ್ಲದೇ ಈಗಾಗಲೇ ಜೀವ ಹಾಗೂ ನಿರ್ದೇಶಕರು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ.

About Author

Leave a Reply

Your email address will not be published. Required fields are marked *

You may have missed