ಗೃಹಲಕ್ಷ್ಮಿ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಆರಂಭ

0

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಅರಂಭವಾಗಿದೆ. ಅರ್ಜಿ ನೋಂದಣಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ಅಗತ್ಯವಿದ್ದು, ಬೆಂಗಳೂರು ಇನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಇಂದಿನಿಂದ ಬೆಂಗಳೂರು ಒನ್ ಕೇಂದ್ರಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ. ಕೇಂದ್ರಗಳಲ್ಲಿ ನೂಕು ನುಗ್ಗಲಾಗುವ ಸಾಧ್ಯತೆ ಇದೆ. ಸಧ್ಯ 1.28 ಕೋಟಿಯಷ್ಟು ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು.
ಗುರುವಾರದಿಂದ ಅಧಿಕೃತವಾಗಿ ಅರ್ಜಿ ಸ್ವೀಕಾರ ಆರಂಭ ಆಗಲಿದೆ. ಇದಕ್ಕಾಗಿ ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂಬುದು ಮೊಬೈಲ್ಗಳಿಗೆ ಸಂದೇಶ ಬರಲಿದೆ. ಆಗ ನಿಗದಿತ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬೇಕು. ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.
ಕಾಂಗ್ರೆಸ್ನ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖದ್ದಾಗಿದೆ. ಕುಟುಂಬದ ಮನೆ ಯಜಮಾನಿ ಖಾತೆಗೆ ತಿಂಗಳಿಗೆ 2,000 ರೂ. ನೀಡುವುದು ಯೋಜನೆಯ ಉದ್ದೇಶವಾಗಿದೆ. ಯಜಮಾನಿಯಾಗಲಿ ಅಥವಾ ಆಕೆ ಪತಿಯಾಗಲಿ ತೆರಿಗೆ ಪಾವತಿದಾರರಾಗಿದ್ದಲ್ಲಿ, ಅವರಿಗೆ ಈ ಯೋಜನೆ ಸೌಲಭ್ಯ ಸಿಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

About Author

Leave a Reply

Your email address will not be published. Required fields are marked *

You may have missed