ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

0

ಬೆಂಗಳೂರು: ಬೆಂಗಳೂರಿನ ಹೈಕೋರ್ಟ್​ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 13 ಲಾ ಕ್ಲರ್ಕ್​ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈ ಕೋರ್ಟ್​ನ ಅಧಿಕೃತ ವೆಬ್​ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 50% ಅಂಕಗಳೊಂದಿಗೆ ಕಾನೂನಿನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು,

ಅಂಕಗಳೊಂದಿಗೆ ಕಾನೂನಿನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು, ಈ ಹುದ್ದೆಗಳಿಗೆ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಶೈಕ್ಷಣಿಕ ದಾಖಲೆಗಳ ಪರಿಶೀಲನೆ ಮತ್ತು ಪ್ರಮಾಣೀಕರಣ ಹಾಗೂ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed