ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಬೆಂಗಳೂರು: ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಬೆಂಗಳೂರು ವಿಶ್ವವಿದ್ಯಾನಿಲಯ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕುವಂತೆ ಕೋರಿದೆ.

ಬೆಂಗಳೂರಿನಲ್ಲಿ ವೃತ್ತಿ ಜೀವನ ನಡೆಸಬೇಕು ಎಂದುಕೊಂಡಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ಜನವರಿ 20, 2023ಕ್ಕೆ ಮುನ್ನ ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕಾಗಿದೆ.

ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮಾಸ್ಟರ್ ಆಫ್​ ಲೈಬ್ರರಿ ಸೈನ್ಸ್​, ಎಂ.ಫಿಲ್, ಪಿಎಚ್​.ಡಿ ಪಡೆದಿರಬೇಕು. ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

About Author

Leave a Reply

Your email address will not be published. Required fields are marked *

You may have missed