ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ : ಕೇಂದ್ರದಿಂದ ಆದೇಶ

0

ವದೆಹಲಿ: ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ (Praveen Sood) ನೇಮಕಗೊಂಡಿದ್ದಾರೆ.

ಕರ್ನಾಟಕ ಕೇಡರ್‌ ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಉನ್ನತ ಮಟ್ಟದ ಆಯ್ಕೆ ಸಮಿತಿಯು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರನ್ನಾಗಿ ನೇಮಿಸಿದೆ.

 

ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಸೇವೆ ಸಲ್ಲಿಸುತ್ತಿರುವ ಸೂದ್ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ.

ರಾಜ್ಯ ಕೇಡರ್‌ನ 1986-ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಡಿಜಿಪಿ ಪ್ರವೀಣ್‌ ಸೂದ್‌ ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಿಸುತ್ತಿದ್ದಾರೆ. ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಸುತ್ತಿದ್ದಾರೆ. ಪ್ರವೀಣ್‌ ಸೂದ್‌ ಒಬ್ಬ ನಾಲಾಯಕ್‌. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದರು.

ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ. ಮೇ 26 ಕ್ಕೆ ಸಿಬಿಐ ನಿರ್ದೇಶಕರಾಗಿ ಪ್ರವೀಣ್‌ ಸೂದ್‌ ಅಧಿಕಾರ ಸ್ವೀಕರಿಸಲಿದ್ದಾರೆ.

ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.

About Author

Leave a Reply

Your email address will not be published. Required fields are marked *

You may have missed