.20ಕ್ಕೆ ಆಟೋ ಸಂಚಾರ ಸಂಪೂರ್ಣ ಬಂದ್!

0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚರಿಸುತ್ತಿರುವ ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಆಟೋ ಚಾಲಕರು ರಾಜ್ಯ ಸರ್ಕಾರಕ್ಕೆ ಒತ್ತಡ ಹೇರುತ್ತಲೇ ಬರುತ್ತಿದ್ದಾರೆ. ಈ ಹಿನ್ನಲೆ ಮಾ.20 ರಂದು ಬೆಂಗಳೂರಲ್ಲಿ ಆಟೋ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

 

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ್ದನ್ನು ನಾವು ಖಂಡಿಸುತ್ತೇವೆ, ಸಾರಿಗೆ ಇಲಾಖೆ ಓಲಾ, ಉಬರ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೂಡಲೇ ರ್ಯಾಪಿಡೋ ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಾ.20 ರಂದು ನಗರದಲ್ಲಿ ಆಟೋ ಸೇವೆ ಇರಲ್ಲ. ಅಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕುತ್ತೇವೆ. ಈ ಮೂಲಕ ಸರ್ಕಾರದ ಗಮನ ಸೆಳೆಯುತ್ತೇವೆ, ಈ ಕೂಡಲೇ ಸರ್ಕಾರ ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು,ಇದರಿಂದ ಆಟೋ ಚಾಲಕರ ಆದಾಯಕ್ಕೆ ಹೊಡೆತ ಬಿದ್ದಿದೆ ಎಂದು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed