ಸಿಎಂ ಆಯ್ಕೆ ಹಿನ್ನೆಲೆ: ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ಆರಂಭ

0

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ (Karnataka Chief minister) ಯಾರು ಎಂಬ ಬಗ್ಗೆ ಕಾಂಗ್ರೆಸ್ನಲ್ಲಿ ನಿರ್ಮಾಣವಾಗಿದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಹೈಕಮಾಂಡ್ ಆಯ್ಕೆ ಮಾಡಿ ಅಧಿಕೃತ ಘೋಷಣೆ ಮಾಡಿದೆ.

ಇನ್ನು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ನಿಂದ ಸಿಎಂ ಆಯ್ಕೆ ಬೆನ್ನಲ್ಲೇ ಇದೀಗ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯಲ್ಲು ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ.

ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಗೊಂದಲ ಪರಿಹಾರ ಆಗುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ(opposition leader )ಆಯ್ಕೆಗೆ ಮುಂದಾಗಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಂಗಾಮಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಕುರಿತು ಶೀಘ್ರವೇ ಶಾಸಕಾಂಗ ಪಕ್ಷದ ಸಭೆ ಕರೆದು ಪ್ರಕ್ರಿಯೆ ನಡೆಸುತ್ತೇವೆ ಎಂದಿದ್ದಾರೆ.

About Author

Leave a Reply

Your email address will not be published. Required fields are marked *

You may have missed