ಬೆಂಗಳೂರು- ಹುಬ್ಬಳ್ಳಿ ಎಕ್ಸ್ ಪ್ರೆಸ್ ರೈಲು ಶೀಘ್ರದಲ್ಲೇ ಸ್ಥಗೀತ

0

ಬೆಂಗಳೂರು: ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ ಶೀಘ್ರದಲ್ಲೇ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ.

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ. ರೈಲು ಮೂರು ಎಸಿ ಕೋಚ್​ಗಳು ಮತ್ತು ಏಳು ಸ್ಲೀಪರ್ ಕೋಚ್​ಗಳು ಸೇರಿದಂತೆ 16 ಕೋಚ್‌ಗಳನ್ನು ಹೊಂದಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲಿನ ಶೇಕಡಾ 34 ಕ್ಕಿಂತ ಕಡಿಮೆ ಸೀಟುಗಳಷ್ಟೇ ಭರ್ತಿಯಾಗುತ್ತಿವೆ. ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ಪ್ರಾರಂಭವಾದಾಗಿನಿಂದ, ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ಈ ರೈಲನ್ನು ನಷ್ಟದೊಂದಿಗೆ ನಿರ್ವಹಿಸಲಾಗುತ್ತಿದೆ. ಹೀಗಾಗಿ ಜುಲೈ 16ರಿಂದ ರೈಲನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ

About Author

Leave a Reply

Your email address will not be published. Required fields are marked *

You may have missed