ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ

0

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್ ಪ್ರೆಸ್ ಹೆದ್ದಾರಿ ತತ್ತರಿಸಿತ್ತು.

ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು.

ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣಮಳೆಗೆ ಸಾವಿರಾರು ಕೋಟಿ ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನಮಾರಿಯಾಗಿ ಮಾರ್ಪಟ್ಟಿದೆ ಎಂದಿದ್ದಾರೆ. ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸಿದ ಈ ‘ ಚುನಾವಣಾ ಗಿಮಕ್ ‘ ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು? ಎಂದು ಪ್ರಶ್ನಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed