ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ

0

ಬೆಂಗಳೂರು:– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ಭೇಟಿ ಮಾಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರೇಣುಕಾಚಾರ್ಯ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.

ಈ ವೇಳೆ ಕೆಲ ಕಾಲ ಮಾತುಕತೆ ನಡೆಸಿದರು.

ಇನ್ನೂ ಭೇಟಿ ಬಳಿಕ ಮಾತನಾಡಿದ ರೇಣುಕಾಚಾರ್ಯ, ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆ ರಾಜಕಾರಣದ ಇದೆ ಎಂಬ ಪ್ರತಾಪ್ ಸಿಂಹ ಮತ್ತು ಸಿಟಿ ರವಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹೊಂದಾಣಿಕೆ ರಾಜಕಾರಣದ ಬಗ್ಗೆ ಸಿಟಿ ರವಿ, ಪ್ರತಾಪ್ ಸಿಂಹ ಅವರನ್ನೇ ಕೇಳಬೇಕು, ನನಗೆ ಮಾಹಿತಿ ಇಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೆ ಏನು ಎನ್ನುವ ಬಗ್ಗೆ ಮಾಹಿತಿ ಇಲ್ಲ, ಅವರನ್ನೇ ಕೇಳಿ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮೊದಲು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ರೇಣುಕಾಚಾರ್ಯ ಭೇಟಿಯಾಗಿದ್ದರು.

About Author

Leave a Reply

Your email address will not be published. Required fields are marked *

You may have missed