ಅಧಿಕಾರ ಕಳೆದುಕೊಂಡ ಬಿಜೆಪಿ ಬಾಲ ಸುಟ್ಟ ಬೆಕ್ಕಿನಂತಾಗಿದೆ: ಸಚಿವ ದಿನೇಶ್ ಗುಂಡೂರಾವ್

0

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಸಾಧ್ಯತೆಯ ಬಗ್ಗೆ ಹೇಳಿಕೆ ನೀಡಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಬೊಮ್ಮಾಯಿಯವರೇ,ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ?

ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ತನಿಖಾ ಏಜೇನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌. ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಬ್ಧಾರಿಯುತ ಸರ್ಕಾರದ ಕರ್ತವ್ಯ. ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೆ’ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಬೊಮ್ಮಾಯಿಯವರೇ ಒಂದು ಜವಾಬ್ಧಾರಿಯುತ ಸರ್ಕಾರವಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ. ನೀವು ಕಾನೂನು ಉಲ್ಲಂಘಿಸುವವರ ಪರವೇ?’ ಎಂದು ಪ್ರಶ್ನಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed