840 ಹೊಸ ಬಸ್ ಗಳ ಖರೀದಿಗೆ ಕಾರ್ಯಾದೇಶ ನೀಡಲು ಬಿಎಂಟಿಸಿಗೆ ಅನುಮತಿ: ಹೈಕೋರ್ಟ್

0

ಬೆಂಗಳೂರು: ನೂತನವಾಗಿ 840 ಬಸ್ ಗಳನ್ನು ಖರೀದಿಸುವುದಕ್ಕೆ ಸಂಬಂಧಿಸಿದಂತೆ ಕಾರ್ಯಾದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳಲು ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆಗೆ ಬೆಂಗಳೂರಿನ ಹೈಕೋರ್ಟ್ ಸೂಚಿಸಿದೆ. ಹೊಸ ಬಸ್ಗಳ ಖರೀದಿಗೆ ಬಿಬಿಎಂಟಿಸಿ ಹೊರಡಿಸಿದ ಟೆಂಡರ್ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ವಿಶೇಷಚೇತನ ಸುನೀಲ್ ಕುಮಾರ್ ಜೈನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಸಲ್ಲಿಸಿದ್ದರು.

 

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಇನ್ನೂ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಬಿಎಂಟಿಸಿ ಖರೀದಿಗೆ ಮುಂದಾಗಿರುವ ಬಸ್ ಗಳಲ್ಲಿ ದಿವ್ಯಾಂಗಸ್ನೇಹಿ ಅಲ್ಲ. ಹೀಗಾಗಿ ಟೆಂಡರ್ ಹೊರಡಿಸಿರುವ ಅಧಿಸೂಚನೆಯನ್ನು ರದ್ದು ಮಾಡಬೇಕು ಎಂದು ನ್ಯಾಯಪೀಠಕ್ಕೆ ವಿವವರಿಸಿದರು. ವಾದ ಆಲಿಸಿದ ನ್ಯಾಯಪೀಠ ಈ ಆದೇಶ ನೀಡಿದೆ.

About Author

Leave a Reply

Your email address will not be published. Required fields are marked *

You may have missed