ಪ್ರಾಮಾಣಿಕತೆಯಿಂದ ದುಡಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ: ಹೆಚ್.ಡಿ.ದೇವೇಗೌಡ

0

ಬೆಂಗಳೂರು: ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನಿನ್ನೆ ಸಂಜೆ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಹೆಚ್.ಡಿ.ದೇವೇಗೌಡರು (HD DeveGowda)ಕೆಲವು ಹಿತನುಡಿಗಳನ್ನು ಹೇಳಿದರು. ಈ ಬಾರಿಯ ವಿಧಾನಸಭಾ ಚುನಾವಣೆ 2023ರಲ್ಲಿ ನಮ್ಮ ಜೆಡಿಎಸ್​ ಪಕ್ಷದಿಂದ 19 ಸೀಟು ಗೆದ್ದಿದ್ದೇವೆ ಎಂಬ ಆತಂಕ ಬೇಡ.

119 ಸೀಟು ಗೆಲ್ಲುವ ದಿಕ್ಕಿನಲ್ಲಿ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ. ನೀವು ಯಾರೂ ಧೈರ್ಯ ಕಳೆದುಕೊಳ್ಳಬೇಡಿ ಎಂದು ಹೇಳಿದರು. ಚುನಾವಣೆಯಲ್ಲಿ ಸೋಲು ಗೆಲವು ಎನ್ನುವುದು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಂಡು ಜನರ ಜೊತೆ ನಿಂತು ಕೆಲಸ ಮಾಡೋಣ.

ಪ್ರಾಮಾಣಿಕತೆ, ಬದ್ಧತೆ, ಅಚಲತೆಯಿಂದ ದುಡಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ ಎಂದು ನೂತನ ಶಾಸಕರನ್ನು ಹೆಚ್.ಡಿ.ದೇವೇಗೌಡರು ಹುರಿದುಂಬಿಸಿದರು. ಮುಂದೆ ಅನೇಕ ಚುನಾವಣೆಗಳು ಬರಲಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ಕೆಲಸ ಮಾಡಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿ. ನಿಮ್ಮ ಜತೆ ನಾನು, ಕುಮಾರಸ್ವಾಮಿ ಅವರು ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹೆದರಿ ಕೂತರೆ ಏನನ್ನೂ ಸಾಧನೆ ಮಾಡಿದಂತೆ ಆಗುವುದಿಲ್ಲ ಎಂದು ಹೆಚ್.ಡಿ.ದೇವೇಗೌಡರು ಜೆಡಿಎಸ್​​ ನಾಯಕರು, ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

About Author

Leave a Reply

Your email address will not be published. Required fields are marked *

You may have missed