ರಾಧಿಕಾ ಕುಮಾರಸ್ವಾಮಿಗೆ ಜೋಡಿಯಾದ ಬಿಟೌನ್ ನಟ: ಏಳು ಭಾಷೆಗಳಲ್ಲಿ ಸ್ವೀಟಿ ಸಿನಿಮಾದ ಶೂಟಿಂಗ್

0

ಸ್ಯಾಂಡಲ್ ವುಡ್ ನಟಿ ರಾಧಿಕ ಕುಮಾರಸ್ವಾಮಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೆಲ ಸಮಯದ ಬಳಿಕ ರಾಧಿಕ ಕುಮಾರಸ್ವಾಮಿ ಚಿತ್ರರಂಗದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ. ಸದ್ಯ ರಾಧಿಕಾ ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ ಚಿತ್ರದ ಮುಹೂರ್ತ ಸಮಾರಂಭ ಮೇ 13 ರಂದು ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯಲಿದೆ‌.

 

ಯುವ ನಿರ್ದೇಶಕ ಎಂ.ಶಶಿಧರ್ ನಿರ್ದೇಶಿಸುತ್ತಿರುವ ಈ ಸಿನಿಮಾವನ್ನು ರವಿರಾಜ್ ಎಂಬುವವರು ನಿರ್ಮಿಸುತ್ತಿದ್ದು ಒಟ್ಟು ಏಳು ಭಾಷೆಗಳಲ್ಲಿ ಸಿನಿಮಾ ತಯಾರಾಗಲಿದೆ. ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿಗೆ ಜೋಡಿಯಾಗಿ ಬಾಲಿವುಡ್ ನಟ ಶ್ರೇಯಸ್ ತಲಪಡೆ ಬಣ್ಣ ಹಚ್ಚುತ್ತಿದ್ದಾರೆ. ಎಂ.ಎಸ್.ಸಿ ಇನ್ ಫಿಲಂ ಮೇಕಿಂಗ್ ಕಲಿತಿರುವ ನಿರ್ದೇಶಕ ಶಶಿಧರ್ ವಿ, ಎಫ್ ಎಕ್ಸ್ ನಲ್ಲೂ ಪರಿಣತಿ ಹೊಂದಿದ್ದಾರೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ ‘ಘಾರ್ಗ’ ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ.

ಅಜಾಗ್ರತ ಒಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ. ಏಳು ಭಾಷೆಗಳಲ್ಲಿಯೂ ನೇರ ಚಿತ್ರೀಕರಣವಾಗುತ್ತಿರುವುದು ಇದರ ವಿಶೇಷ. ಕನ್ನಡ ಚಿತ್ರರಂಗದ ರಾಧಿಕಾ ಕುಮಾರಸ್ವಾಮಿ, ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು ನಟಿಸುತ್ತಿದ್ದಾರೆ.

ಹಾಗೆ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್, ಕಾಲಿವುಡ್ ನಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ್ ಪ್ರಕಾಶ್ ಮತ್ತು ಬಾಲಿವುಡ್ ನ ಶ್ರೇಯಸ್ ತಲಪಾಡೆ ನಾಯಕ ನಟನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

About Author

Leave a Reply

Your email address will not be published. Required fields are marked *

You may have missed