ಕಟ್ಟಡದಿಂದ ಜಿಗಿದು ಯುವಕ ಮೃತಪಟ್ಟ ಪ್ರಕರಣ: ತನಿಖೆ ಸಿಐಡಿ ಗೆ ವರ್ಗಾವಣೆ

0

ಬೆಂಗಳೂರು: ಬೆಂಗಳೂರಿನ ಬೇಗೂರು ರಸ್ತೆಯಲ್ಲಿ ಕಟ್ಟಡದಿಂದ ಜಿಗಿದು ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಗೆ ಪ್ರಕರಣದ ತನಿಖೆ ವರ್ಗಾವಣೆ ಮಾಡಲಾಗಿದೆ. ಮೊಹಮ್ಮದ್ ಹುಸೇನ್ ಮೃತ ದುರ್ದೈವಿ ಎಂದು ಹೇಳಲಾಗಿದೆ. ಬೇಗೂರು ರಸ್ತೆಯಲ್ಲಿ ನೆಲೆಸಿದ್ದ ಮೊಹಮ್ಮದ್ ಹುಸೇನ್ ಮನೆಗೆ ತೆರಳಿದ್ದರು.

ಆದರೆ ಈ ವೇಳೆ ಮೊಹಮ್ಮದ್ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದನು.

ಪೊಲೀಸರೇ ತನ್ನ ಮಗನನ್ನು ಕಟ್ಟಡದಿಂದ ತಳ್ಳಿ ಹತ್ಯೆ ಮಾಡಿದ್ದಾರೆ ಎಂದು ಮೃತ ಯುವಕನ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನಲೆ ಸಂಕ್ಷಿಪ್ತವಾದ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಇನ್ನೂ ಸ್ಥಳೀಯ ಯುವತಿಗೆ ಬೆದರಿಕೆ ಹಾಕಿದ ಆರೋಪದಡಿ ಮೊಹಮ್ಮದ್ ಹುಸೇನ್ ವಿರುದ್ಧ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ನಿನ್ನೆ ಸಂಜೆ 7 ಗಂಟೆಯ ಸುಮಾರಿಗೆ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸ್ ಸಿಬ್ಬಂದಿ ತೆರಳಿದ್ದಾಗ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ.

About Author

Leave a Reply

Your email address will not be published. Required fields are marked *

You may have missed