ಚೆಕ್ ಬೌನ್ಸ್ ಪ್ರಕರಣ: ನಿರ್ದೇಶಕ ಗುರು ಪ್ರಸಾದ್ ಗೆ ಜಾಮೀನು ಮಂಜೂರು

0

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ನಿನ್ನೆ ಬಂಧನದ ಬೆನ್ನಲೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿ ಗುರುಪ್ರಸಾದ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದರು.

ಹೀಗಾಗಿ ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ್ದರಿಂದ ಗಿರಿನಗರ ಠಾಣೆ ಪೊಲೀಸರು ಶುಕ್ರವಾರ ಗುರುಪ್ರಸಾದ್ ಅವರನ್ನು ಬಂಧಿಸಿದ್ದರು. ಬಳಿಕ 21ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿಯಿಂದ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed