ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ಮು ವಿತರಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0

ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ ಮುಂಭಾಗದ ವೇದಿಕೆಯಲ್ಲಿ ದೀಪ ಬೆಳಗುವ ಮೂಲಕ ಸಿಎಂ ಸಿದದ್ರಾಮಯ್ಯ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಿದರು.ಇದೇ ವೇಳೆ ಶಕ್ತಿ ಯೋಜನೆಯ ಲಾಂಚನವನ್ನು ಬಿಡುಗಡೆ ಮಾಡಲಾಯಿತು. ಅಲ್ಲದೇ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಲಾಯಿತು.ಇದೇ ವೇಳೆ ಆಯ್ದ 5 ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಾರಿಗೆಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ.ಜಾರ್ಜ್, ಮಧುಬಂಗಾರಪ್ಪ, ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ವಿಧಾನಸೌಧ ಎದುರು ನಡೆದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ. ಸುಮಿತ್ರಾ, ರಾಧಾ, ಪ್ರೇಮಾ, ಕಲಾವತಿ, ಪವಿತ್ರಾ ಅವರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ.

About Author

Leave a Reply

Your email address will not be published. Required fields are marked *

You may have missed