ಮಾ.25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ: ಎನ್ ರವಿಕುಮಾರ್

0

ಬೆಂಗಳೂರು: ಮಾ.25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ನಡೆಯಲಿದ್ದು, ಅಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ವಿಜಯಸಂಕಲ್ಪ ಯಾತ್ರೆ ಆರಂಭವಾಗಿ 15 ದಿನ ಕಳೆದಿದೆ.

ನಾಲ್ಕು ತಂಡಗಳಲ್ಲಿ ನಡೆಯುತ್ತಿರುವ ಯಾತ್ರೆಗಳು ಯಾವುದೇ ತೊಂದರೆಯಾಗದೆ ಯಶಸ್ವಿಯಾಗಿ ನಡೆಯುತ್ತಿದೆ. 4 ಯಾತ್ರೆಗಳು 151 ವಿಧಾನಸಭಾ ಕ್ಷೇತ್ರ ತಲುಪಿದೆ. 60 ಲಕ್ಷ ಜನ ಕಾರ್ಯಕರ್ತರು ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ರಥಯಾತ್ರೆಯಲ್ಲಿ ನಮ್ಮೆಲ್ಲಾ ಶಾಸಕರು, ಸಂಸದರು ಭಾಗಿಯಾಗಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯದ ನಾಯಕರು, ರಥದ ಉಸ್ತುವಾರಿಗಳು ಸೇರಿ 45 ಜನ ಭಾಗಿಯಾಗಿದ್ದಾರೆ. 110 ರೋಡ್ ಶೋ, 41 ಬಹಿರಂಗ ಸಭೆ ಮಾಡಲಾಗಿದೆ. ವಿಜಯಸಂಕಲ್ಪ ಯಶಸ್ವಿ ಯಾತ್ರೆಗೆ ಕಾರಣರಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನರು ರಥಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಕೋಲಾರ, ಶಿಡ್ಲಘಟ್ಟ, ಗೌರಿಬಿದನೂರು ಕಡೆ 10-15 ಸಾವಿರ ಜನ ಭಾಗಿಯಾಗಿದ್ದಾರೆ. ಬಸವಕಲ್ಯಾಣ ಕಾರ್ಯಕ್ರಮದಲ್ಲಿ 45 ಸಾವಿರ ಜನರು ಭಾಗಿಯಾಗಿದ್ದರೆ ಎಂದು ಹೇಳಿದರು. ರಾಜ್ಯದಲ್ಲಿ ನಾಲ್ಕು ದಿಕ್ಕಿನಿಂದ ಆರಂಭಗೊಂಡಿರುವ ರಥಯಾತ್ರೆ ಅಂತಿಮ ಹಂತ ತಲುಪಿದ್ದು, ಮಾರ್ಚ್ 25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಮಾರೋಪ ಭಾಷಣ ಮಾಡಲಿದ್ದು, ಕಾರ್ಯಕ್ರಮಕ್ಕೆ 10 ಲಕ್ಷ ಜನರನ್ನು ಸೇರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed