ಕಾಂಗ್ರೆಸ್ 2ನೇ ಪಟ್ಟಿ ಕಗ್ಗಂಟು: ಕುತೂಹಲ ಮೂಡಿಸಿದ ಖರ್ಗೆ- ಡಿಕೆಶಿ ಮಾತುಕತೆ

0

ಬೆಂಗಳೂರು: ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇನ್ನೂ ಒಮ್ಮತ ಮೂಡಿಲ್ಲ. ಈ ನಡುವೆ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

 

ಶನಿವಾರ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಆದರೆ ಅಧಿಕೃತವಾಗಿ ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಾರದೆ ಇದ್ದರೂ, ಸದ್ಯ ಟಿಕೆಟ್ ವಿಚಾರವಾಗಿ ನಡೆಯುತ್ತಿರುವ ಆಂತರಿಕ ತಿಕ್ಕಾಟದ ಹಿನ್ನೆಲೆಯ ನಡುವೆ ಈ ಭೇಟಿ ಸಹಜವಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇದೀಗ ಉಳಿದ 100 ಕ್ಷೇತ್ರಗಳ ಹೆಸರುಗಳನ್ನು ಅಂತಿಮಗೊಳಿಸಬೇಕಾಗಿದೆ. ಈ ನಡುವೆ ಸುಮಾರು 35 ಕ್ಷೇತ್ರಗಳಿಗೆ ಓರ್ವ ಅಭ್ಯರ್ಥಿಯ ಹೆಸರು ಫೈನಲ್ ಆಗಿದೆ. ಉಳಿದ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಾಕಷ್ಟು ಜಟಿಲಗೊಂಡಿದೆ.

ಅದರಲ್ಲೂ ಪುತ್ತೂರು, ಮಂಗಳೂರು ಉತ್ತರ, ಕಲಘಟಗಿ, ತೀರ್ಥಹಳ್ಳಿ, ದಾಸರಹಳ್ಳಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಜಟಿಲಗೊಂಡಿದೆ. ಪುತ್ತೂರಿನಲ್ಲಿ ಡಿಕೆಶಿ ಬೆಂಬಲಿತರ ಅಶೋಕ್ ರೈಗೆ ಟಿಕೆಟ್ ನೀಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ಮಂಗಳೂರು ಉತ್ತರದಲ್ಲೂ ಮೊಯ್ದಿನ್ ಭಾವಾ ಹಾಗೂ ಇನಾಯತ್ ಅಲಿ ನಡುವೆ ಪೈಪೋಟಿ ಇದೆ.

About Author

Leave a Reply

Your email address will not be published. Required fields are marked *

You may have missed