ಕಾಂಗ್ರೆಸ್ ‘ಗ್ಯಾರಂಟಿ ಜಾಹೀರಾತು ಜನಮಾನಸದಿಂದ ಮಾಸಿಲ್ಲ: ಹೆಚ್ ಡಿ ಕುಮಾರಸ್ವಾಮಿ

0

ಬೆಂಗಳೂರು: ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಅವರು, ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತಿದೆ, ಆಕ್ರೋಶವೂ ಹೆಚ್ಚುತ್ತಿದೆ.

ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ.

ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಮೇಷ ಎಂದರೆ ಜನ ಒಪ್ಪುವರೇ? ಎಂದು ಹೇಳಿದ್ದಾರೆ. ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ.

ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದು ಟೀಕಿಸಿದ್ದಾರೆ. ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ‘ಗ್ಯಾರಂಟಿ ಜಾಹೀರಾತು’ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ, ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed