ಮೋದಿ ರೋಡ್ಶೋ ವೇಳೆ ಕಾಂಗ್ರೆಸ್ ಷಡ್ಯಂತ್ರ ಮಾಡಲು ಸಂಚು ರೂಪಿಸಿದೆ: ಶೋಭಾ ಕರಂದ್ಲಾಜೆ

0

ಬೆಂಗಳೂರು: ವಿಧಾನಸಭೆ ಚುನಾವಣೆ(Karnataka Assembly Election 2023)ಗೆ ಇನ್ನೇನು ಐದು ದಿನಗಳು ಮಾತ್ರ ಬಾಕಿ ಉಳಿದಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಪ್ರಧಾನಿ ಮೋದಿ(Narendra Modi) ಮೇ.6 ಮತ್ತು 7ರಂದು ಬೆಂಗಳೂರಿನಲ್ಲಿ ರೋಡ್​ಶೋ ನಡೆಸಲಿರುವ ಕುರಿತು ‘ ಮೋದಿ ರೋಡ್​ ಶೋ ವೇಳೆ ಕಾಂಗ್ರೆಸ್ ಷಡ್ಯಂತ್ರ ಮಾಡಿದ್ದು, ಈ ವೇಳೆ ಆಂಬುಲೆನ್ಸ್​ಗಳನ್ನ ತರೋದಕ್ಕೆ ಕಾಂಗ್ರೆಸ್ ಸಂಚು ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaj) ಆರೋಪಿಸಿದರು.

 

ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ಯಾವುದೇ ಆಂಬುಲೆನ್ಸ್​ಗೂ ರೋಡ್​ ಶೋ ವೇಳೆ ಭಂಗ ಮಾಡದೇ ಹೋಗಲು ಅವಕಾಶ ಇದೆ. ಆದ್ರೆ, ಆಂಬುಲೆನ್ಸ್ ಗಳಲ್ಲಿ ರೋಗಿ ಇದಾರಾ? ಇಲ್ವಾ. ಎಂದು ತಪಾಸಣೆ ಮಾಡುವಂತೆ ಪೊಲೀಸರಿಗೆ ಸೂಚಿಸಲಾಗಿದ್ದು, ಕಾಂಗ್ರೆಸ್ ಮೋದಿ ರೋಡ್ ಶೋ ಬಗ್ಗೆ ಅಪಪ್ರಚಾರ ಮಾಡ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಇದೇ ವೇಳೆ ಮೇ 7ಕ್ಕೆ ನೀಟ್ ಪರೀಕ್ಷೆ ಇರುವ ಕುರಿತು ‘ಮೇ 7ಕ್ಕೆ ನೀಟ್ ಪರೀಕ್ಷೆ ಹಿನ್ನೆಲೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ.

ಹೌದು ನೀಟ್ ಪರೀಕ್ಷೆ ಬಗ್ಗೆ ಪ್ರಧಾನಮಂತ್ರಿ ಮೋದಿ ಗಮನಕ್ಕೆ ತಂದಿದ್ದೆವು. ಪ್ರಧಾನಿ ಮೋದಿಗೆ ವಿದ್ಯಾರ್ಥಿಗಳ ಮೇಲೆ ವಿಶೇಷ ಕಾಳಜಿ ಇದೆ. ಇದೇ ಕಾರಣಕ್ಕೆ ರೋಡ್​​ ಶೋನಿಂದ ಒಬ್ಬ ವಿದ್ಯಾರ್ಥಿಗೂ ತೊಂದರೆ ಆಗಬಾರದು ಎಂದರು. ಮೋದಿ ಅಪೇಕ್ಷೆಯಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಆಗಿದ್ದು, ಶನಿವಾರ ಮೋದಿ 26.5 ಕಿ.ಮೀ ರೋಡ್​​ ಶೋ ನಡೆಸಲಿದ್ದು, ಮತ್ತು ಭಾನುವಾರ ಚಿಕ್ಕ ರೋಡ್ ಶೋ ಇರುತ್ತದೆ. ಜೊತೆಗೆ ಮೋದಿ ರೋಡ್ ಶೋ ಮಾರ್ಗದಲ್ಲಿ ಕಡಿಮೆ ಪರೀಕ್ಷಾ ಕೇಂದ್ರಗಳಿವೆ. ಹಾಲ್​ ಟಿಕೆಟ್​ ತೋರಿಸಿದರೆ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು. ಪರೀಕ್ಷಾ ಕೇಂದ್ರಕ್ಕೆ ಹೋಗಲು ಅವಕಾಶ ಕೊಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

About Author

Leave a Reply

Your email address will not be published. Required fields are marked *

You may have missed