ದೇಶದಲ್ಲಿ ಕೊರೋನಾ ದಿನೇ ದಿನೇ ಏರಿಕೆ: ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ..?

0

ವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,683 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,69,684ಕ್ಕೆ ಏರಿಕೆಯಾಗಿದೆ.

ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,258ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,72,256ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 2,29,739 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,50,77,322 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 2,20,66,31,979 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

About Author

Leave a Reply

Your email address will not be published. Required fields are marked *

You may have missed