ಶಿವಣ್ಣನ ಹುಟ್ಟುಹಬ್ಬಕ್ಕೆ ಕ್ಷಣಗಣನೆ

0

ಬೆಂಗಳೂರು ;- ಹ್ಯಾಟ್ರಿಕ್ ಹೀರೋ ಶಿವರಾಜ್​​ಕುಮಾರ್​​ ಅವರ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಇಂದು ಮಧ್ಯರಾತ್ರಿ 12 ಗಂಟೆಗೆ ನಟ ಶಿವರಾಜ್​​ಕುಮಾರ್​​ ನಿವಾಸದ ಬಳಿ ಪಟಾಕಿ ಸಿಡಿಸಿ, ಕೇಕ್ ಕಟ್ ಮಾಡಿ ಸಂಭ್ರಮಿಸಲು ಅಭಿಮಾನಿಗಳು ಕಾತುರದಿಂದ ಕಾಯತೊಡಗಿದ್ದಾರೆ.

ನಾಳೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೂ ಅಭಿಮಾನಿಗಳನ್ನು ಭೇಟಿ ಮಾಡಲಿರುವ ಸೆಂಚುರಿ ಸ್ಟಾರ್​, 11 ಗಂಟೆಗೆ ಡಾ.ರಾಜ್​​ಕುಮಾರ್​​ ಅವರ ಸಮಾಧಿಗೆ ಭೇಟಿ‌ ನೀಡಲಿದ್ದಾರೆ. ತದನಂತರ ತಮ್ಮ ಮುಂದಿನ ‘ಗೋಸ್ಟ್’ ಚಿತ್ರದ ಫಸ್ಟ್ ಲುಕ್ ಅನ್ನು ಸಂತೋಷ್ ಚಿತ್ರಮಂದಿರದಲ್ಲಿ ಬಿಡುಗಡೆಗೊಳಿಸಲಿದ್ದಾರೆ.

ಪೋಸ್ಟರ್​ ರಿಲೀಸ್​ ಬಳಿಕ ಮಧ್ಯಾಹ್ನ 2 ಗಂಟೆಗೆ ಮನೆಯ ಬಳಿ ಶುಭಾಶಯ ತಿಳಿಸಲು ಬಂದ ಅಭಿಮಾನಿಗಳಿಗೆ ಉಪಹಾರ ನೀಡುವ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed